ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರೂಪಾಂತರ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಹೊಸ ವರ್ಷಾಚರಣೆ ವೇಳೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದರು.
ಹೊಸ ವರ್ಷಾಚರಣೆ ಸಾರ್ವಜನಿಕವಾಗಿ ಆಚರಿಸುವಂತಿಲ್ಲ. ಕೋವಿಡ್ ನಿಯಮಾವಳಿಗಳನ್ನು ರಾಜ್ಯದ ಜನತೆ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ.60ರಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದಕ್ಕೆ ಬಿಜೆಪಿಯ ಸಾಮೂಹಿಕ ನಾಯಕತ್ವವೇ ಕಾರಣ ಎಂದು ಹೇಳಿದರು.