ಬೆಂಗಳೂರು: ಬ್ರಿಟನ್ ನಿಂದ ಆಗಮಿಸಿರುವ 33 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 70 ಜನರ ಬಗ್ಗೆ ಇನ್ನೂ ಮಾಹಿತಿ ಸಿಗುತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ರೂಪಾಂತರ ಕೊರೊನಾ ವೇಗವಾಗಿ ಹರಡುತ್ತಿದ್ದು, ಬ್ರಿಟನ್ ನಿಂದ ಬಂದಿರುವ 33 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರ ಸಂಪರ್ಕದಲ್ಲಿದ್ದ 5 ಜನರಿಗೂ ಸೋಂಕು ಹರಡಿದ್ದು, ಒಟ್ಟು 38 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದರು.
ಇದೇ ವೇಳೆ ಕೇಂದ್ರದ ಸೂಚನೆ ಹಿನ್ನೆಲೆಯಲ್ಲಿ ನಾಳೆಯಿಂದ 5 ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ಡ್ರೈರನ್ ಆರಂಭಿಸಲಾಗುತ್ತಿದೆ ಎಂದು ಹೇಳಿದರು.