alex Certify BREAKING NEWS: ಭೀಕರ ರಸ್ತೆ ಅಪಘಾತ – KSRTC ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ರಸ್ತೆ ಅಪಘಾತ – KSRTC ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸವದತ್ತಿ ಬಳಿ ಸಂಭವಿಸಿದೆ.

ಇಲ್ಲಿನ ಚಚಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಇಳಕಲ್ ಕಡೆಗೆ ತೆರಳುತ್ತಿದ್ದ ಬಸ್ ಗೆ ಯರಗಟ್ಟಿಯಿಂದ ಬೆಳಗಾವಿಯತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...