alex Certify BREAKING NEWS: ಮರಾಠ ಪ್ರಾಧಿಕಾರ ರಚನೆಗೆ ವಿರೋಧ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಾಠ ಪ್ರಾಧಿಕಾರ ರಚನೆಗೆ ವಿರೋಧ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಎಚ್ಚರಿಕೆ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರಾಧಿಕಾರ ಆದೇಶ ವಾಪಸ್ ಪಡೆಯದಿದ್ದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿವೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶವನ್ನು ನವೆಂಬರ್ 27ರ ಒಳಗಾಗಿ ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಡಿ.5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...