ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದರು.
ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ
ತೀವ್ರ ಉಸಿರಾಟದ ತೊಂದರೆ, ಬಿಪಿ ಹಾಗೂ ಶುಗರ್ ನಿಂದ ರಮೇಶ್ ಜಾರಕಿಹೊಳಿ ಬಳಲುತ್ತಿದ್ದಾರೆ. ನುರಿತ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದರು.