ನವದೆಹಲಿ: ಪಂಚರಾಜ್ಯಗಳ ಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಹಾಗೂ 3 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಸಂದರ್ಭದಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಬಯಲಾಗಿರುವುದು ಬಿಜೆಪಿ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬಿಜೆಪಿ ಹೈಕಮಾಂಡ್ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವುದು ಬಹುತೇಕ ಖಚಿತವಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಉಂಟುಮಾಡುವ ಸಾಧ್ಯತೆ ಇದ್ದು, ಇದು ಹೈಕಮಾಂಡ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವಂತೆ ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.
ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ ಎಂದ ಡಿ.ಕೆ.ಶಿವಕುಮಾರ್
ಇದೇ ಕಾರಣಕ್ಕಾಗಿ ಸಿಎಂ ಯಡಿಯೂರಪ್ಪ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತುರ್ತು ಬುಲಾವ್ ನೀಡಿದ್ದಾರೆ. ಒಟ್ಟಾರೆ ಸಿಡಿ ಪ್ರಕರಣದ ಬೆನ್ನಲ್ಲೇ ಇಂದೇ ರಮೇಶ್ ಜಾರಕಿಹೊಳಿ ತಲೆದಂಡವಾಗುವ ಸಾಧ್ಯತೆ ದಟ್ಟವಾಗಿದೆ.