alex Certify BREAKING NEWS: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ – ಮರ್ಯಾದೆ ಇರುವ ಸರ್ಕಾರವಾದರೆ ತಕ್ಷಣ ರಾಜೀನಾಮೆ ಪಡೆಯಲಿ – ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ – ಮರ್ಯಾದೆ ಇರುವ ಸರ್ಕಾರವಾದರೆ ತಕ್ಷಣ ರಾಜೀನಾಮೆ ಪಡೆಯಲಿ – ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಹೊತ್ತಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಬಯಲಾಗಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ದಟ್ಟವಾಗಿದೆ.

ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಬೇಕು. ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ.

ಸಚಿವರ ಕಾಮಕಾಂಡದ ಸಿಡಿ ಬಟಾಬಯಲಾಗಿದೆ. ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಎಂಬುದು ಇದ್ದರೆ ಕೂಡಲೇ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಲಿ. ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಸಿಎಂ ಬಿ.ಎಸ್.ಯಡಿಯೂರಪ್ಪ ತಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...