ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಹೋರಾಟ, ಪ್ರತಿಭಟನೆ, ಮದುವೆ, ಸಭೆ ಸಮಾರಂಭಗಳು ನಡೆಯುತ್ತಿವೆ. ಇದರಿಂದಾಗಿ ಹೆಚ್ಚು ಜನರು ಒಂದೆಡೆ ಸೇರುತ್ತಿದ್ದಾರೆ. ಕೊರೊನಾ ನಿಯಮಗಳು ಉಲ್ಲಂಘನೆಯಾಗುತ್ತಿವೆ. ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ರಾಜಕಾರಣಿಗಳು ಕೂಡ ಕೋವಿಡ್ ನಿಯಮ ಪಾಲಿಸುತ್ತಿಲ್ಲ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜನರು ಎಚ್ಚೆತ್ತುಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವರೇ ಉತ್ತರ ನೀಡುತ್ತಾರೆ ಎಂದ ಸಿಎಂ
ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ನಾವು ನಿರ್ಬಂಧ ವಿಧಿಸುತ್ತಿಲ್ಲ. ಆದರೆ ಕೋವಿಡ್ ನಿಯಮ ಪಾಲಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯನ್ನು ತಡೆಯಬೇಕಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ನಾಗರಿಕರು ಮುಂಜಾಗೃತಾ ಕ್ರಮಗಳನ್ನು ವಹಿಸುವ ಅಗತ್ಯವಿದೆ. 5 ಜನರಿಗೆ ಒಂದು ಏರಿಯಾದಲ್ಲಿ ಕೊರೊನಾ ಪಾಸಿಟಿವ್ ಬಂದಲ್ಲಿ ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗುವುದು. ಮಾರ್ಚ್ ನಿಂದ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.