ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷಕ್ಕೆ ಕೊರೊನಾ ಎರಡನೇ ಅಲೆ ಅಪ್ಪಳಿಸುವ ಆತಂಕ ಎದುರಾಗಿದ್ದು, ಈ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯೊಂದನ್ನು ನೀಡಿದೆ.
2021ರ ಜನವರಿ, ಫೆಬ್ರವರಿಯಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಜನರ ಓಡಾಟ ಹೆಚ್ಚುವುದರಿಂದ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಮತ್ತೆ ಏರಿಕೆಯಾಗಬಹುದು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ನೈಟ್ ಕರ್ಫ್ಯೂ ಜಾರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಎರಡು ಮೂರು ದಿನಗಳಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.