ಕೋಲಾರ: ಕೊರೊನಾ 2ನೇ ಅಲೆ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕೋಲಾರ ಜಿಲ್ಲೆಯಲ್ಲಿ ಬರೋಬ್ಬರಿ 12 ಜನರು ಬ್ಲ್ಯಾಕ್ ಫಂಗ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಮಾರಣಾಂತಿಕ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಇದೀಗ 12 ಜನರಲ್ಲಿ ಈ ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಅವರಲ್ಲಿ 7 ಜನರನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇನ್ನುಳಿದವರಿಗೆ ಆಂಪೋರಿಯೋಸಿಸ್ ಬಿ ಇಂಜಕ್ಷನ್ ಅಬಾವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲೂ ಸಮಸ್ಯೆಯಾಗಿದೆ.
ಕೊರೊನಾದಿಂದ ಚೇತರಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಸಾತವ್ ವಿಧಿವಶ
ಮಹಾಮಾರಿ ಕೊರೊನಾ ಸೋಂಕಿನಿಂದ ಇನ್ನೇನು ಬಚಾವಾದೆವು ಎಂದು ಗುಣಮುಖರಾಗಿ ನಿಟ್ಟುಸಿರುಬಿಡುತ್ತಿರುವ ಹಲವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು, ಮಧುಮೇಹವಿರುವವರಲ್ಲಿ ಅತಿಯಾದ ಸ್ಟಿರಾಯ್ಡ್, ರೆಮ್ ಡಿಸಿವಿರ್ ಬಳಕೆಯೇ ಈ ಸೋಂಕಿಗೆ ಕಾರಣ ಎನ್ನಲಾಗುತ್ತಿದೆ.