ಬೆಂಗಳೂರು: ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಹತ್ತಿಕ್ಕಲು ಮುಂದಾದ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ರಾಜಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ. ಪೊಲೀರು ರಾಜಭವನ ಚಲೋ ತಡೆಯುತ್ತಿದ್ದಂತೆಯೇ ರೊಚ್ಚಿಗೆದ್ದ ಶಾಸಕಿ ಸೌಮ್ಯ ರೆಡ್ಡಿ ಲೇಡಿ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎನ್ನಲಾಗಿದೆ.
ರಾಜಭವನದ ಬಳಿ ಬರುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗಾರೆಡ್ದಿ, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತಮ್ಮನ್ನು ತಡೆದು ವವಶಕ್ಕೆ ಪಡೆಯಲು ಮುಂದಾದ ಲೇಡಿ ಕಾನ್ಸ್ ಟೇಬಲ್ ಕೈಗೆ ಶಾಸಕಿ ಸೌಮ್ಯ ರೆಡ್ದಿ ಬಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೈ ನಾಯಕರನ್ನು ವಶಕ್ಕೆ ಪಡೆಯುತ್ತಿದ್ದಂತೆ ಕಾಂಗ್ರೆಸ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.