ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವದ ವೇದಿಕೆಯಲ್ಲೇ ಪ್ರಸನ್ನಾನಂದ ಸ್ವಾಮೀಜಿ ಪಟ್ಟು ಹಿಡಿದಿದ್ದು, ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ, ಸಿಎಂ ಬಿ.ಎಸ್.ಯಡಿಯೂರಪ್ಪನವರು ಚುನಾವಣೆ ವೇಳೆ ಮೀಸಲಾತಿ ಭರವಸೆ ನೀಡಿದರು. ಆದರೆ ಈವರೆಗೂ ಈಡೇರಿಸಿಲ್ಲ. ಎಸ್ ಟಿ ಸಮುದಾಯ ಅಂದ್ರೆ ತಾತ್ಸಾರ ಇದ್ಯಾ? ನಾವು ಸಿಎಂ ಬಳಿ ನಮ್ಮ ಸಮಸ್ಯೆ ಹೆಳದೇ ಯಾರ ಬಳಿ ಹೆಳಿಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ
ಇದೇ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸ್ವಾಮೀಜಿ, ಸರ್ಕಾರ ನಮ್ಮ ಬೇಡಿಕೆ ಈಡೇರಿಸಲು ಮಾ.9ರವರೆಗೆ ಕಾಲಾವಕಾಶ ಕೊಡುತ್ತೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ಮಾ.9ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಒಂದು ವೇಳೆ ನಾನು ಸತ್ತರೆ ನೀವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.