ಬೆಂಗಳೂರು: ವಿಧಾನ ಪರಿಷತ್ ಕಲಾಪ ಮತ್ತೆ ವಿಸ್ತರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನಿನ್ನೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ನೂತನ ಸಭಾಪತಿ ಆಯ್ಕೆ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಫೆ.10ರವರೆಗೆ ಪರಿಷತ್ ಕಲಾಪ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳ
ಮಂಗಳವಾರ ಸಭಾಪತಿ ಆಯ್ಕೆ ಚುನಾವಣೆ ನಡೆಯಲಿದ್ದು, ಸೋಮವಾರ ಸಭಾಪತಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಷತ್ ಕಲಾಪ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.
ವಿಧಾನ ಪರಿಷತ್ ಕಲಾಪ ವಿಸ್ತರಣೆ ಕುರಿತು ಕೈಗೊಂಡ ನಿರ್ಧಾರಗಳ ಬಗ್ಗೆ ರಾಜ್ಯಪಾಲರಿಗೆ ಸರ್ಕಾರ ವರದಿ ರವಾನಿಸಿದೆ ಎಂದು ತಿಳಿದು ಬಂದಿದೆ.