alex Certify BREAKING NEWS: ವಿವಾದದ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ; ಬಿಪಿಎಲ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿವಾದದ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ; ಬಿಪಿಎಲ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

ಬೆಂಗಳೂರು; ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ, ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಟಿವಿ, ಫ್ರಿಡ್ಜ್, ಬೈಕ್ ಇರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದರು. ಸಚಿವರ ಹೆಳಿಕೆಗೆ ಸ್ವಪಕ್ಷೀಯ ನಾಯಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾದ್ಯಂತ ಸಾರ್ವಜನಿಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು.

ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು – ಸಚಿವ ಕತ್ತಿ ವಿರುದ್ಧ ಗರಂ ಆದ ಸ್ವಪಕ್ಷೀಯ ನಾಯಕರು

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನಿಡಿರುವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆಯೂ ಯಾವುದೇ ತಿದ್ದುಪಡಿ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಈಗಿರುವ ಮಾನದಂಡಗಳೇ ಮುಂದುವರೆಯಲಿವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...