alex Certify BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಬಿಗ್ ಶಾಕ್ – ಶೀಘ್ರದಲ್ಲೇ ಗೇಟ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಬಿಗ್ ಶಾಕ್ – ಶೀಘ್ರದಲ್ಲೇ ಗೇಟ್ ಪಾಸ್

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸರ್ಕಾರದ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್ ನಿರ್ಧರಿಸಿದೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಶೀಘ್ರದಲ್ಲಿಯೇ ಯತ್ನಾಳ್ ಅವರನ್ನು ಬಿಜೆಪಿಯಿಂದ ಹೊರಹಾಕಲಾಗುವುದು. ಯತ್ನಾಳ್ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಆ ವ್ಯಕ್ತಿ ಬಗ್ಗೆ ಮಾತನಾಡಿದರೆ ಆತನ ಪ್ರಸಿದ್ಧಿಯೇ ಹೆಚ್ಚಲಿದೆ ಎಂದರು.

ಯತ್ನಾಳ್ ಮೇಲೆ ಬಿಜೆಪಿಗೆ ಯಾವುದೇ ನಂಬಿಕೆ ಇಲ್ಲ. ಈಗಾಗಲೇ ಯತ್ನಾಳ್ ಗೆ ನೋಟೀಸ್ ನೀಡಲಾಗಿದೆ. ಎಚ್ಚರಿಕೆ ಬಳಿಕವೂ ಪಕ್ಷಕ್ಕೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಾ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಮೂಲಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದೆ ಎಂಬುದು ಸ್ಪಷ್ಟ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...