alex Certify BREAKING NEWS: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ಕೊರೊನಾ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ಕೊರೊನಾ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದ ಮೂಲೆ ಮೂಲೆಯಲ್ಲೂ ಇದೀಗ ಆತಂಕ ಸೃಷ್ಟಿಸಿದೆ. ಶಿವಮೊಗ್ಗಕ್ಕೂ ರೂಪಾಂತರ ಕೊರೊನಾ ಸೋಂಕು ಕಾಲಿಟ್ಟಿದ್ದು, ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬ್ರೀಟನ್ ನಿಂದ ಆಗಮಿಸಿರುವ ರಾಜ್ಯದ 7 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ ಮೂವರು ಬೆಂಗಳೂರಿನವರಾಗಿದ್ದು, ನಲವರು ಶಿವಮೊಗ್ಗದವರಾಗಿದ್ದಾರೆ. ಶಿವಮೊಗ್ಗದಲ್ಲಿ ಸೋಂಕು ಪತ್ತೆಯಾದ ನಾಲ್ವರೂ ಕೂಡ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ಒಟ್ಟು 26 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಸೋಂಕು ವೇಗವಾಗಿ ಹರಡುವುದರಿಂದ ಮುಂಜಾಗೃತಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...