ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯಗಳಿಗೆ ಹರಡಿದೆ. ಹೀಗಾಗಿ ಶೇ.10ರಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದು, ನಾಳೆ ನಡೆಯುವ ಸಭೆಯಲ್ಲಿ ಕಠಿಣ ನಿಯಮ ಜಾರಿಗೆ ತರುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗೆ ಕೊಲೆಗೆ ಸಂಚು: ನರ್ಸ್ ಅರೆಸ್ಟ್
ತಜ್ಞರ ವರದಿ ಸಿಎಂ ಯಡಿಯೂರಪ್ಪನವರಿಗೆ ಕೊಟ್ಟಿದ್ದೇನೆ. ಬೆಂಗಳೂರು ನಗರಕ್ಕೆ ಪ್ರತ್ಯೇಕ ವಿಶೇಷ ಕಠಿಣ ನಿಯಮ ಜಾರಿ ಬಗ್ಗೆ ಚಿಂತನೆ ನಡೆದಿದೆ. ಮಾಧ್ಯಮಗಳು ಜನರಿಗೆ ತಿಳುವಳಿಕೆ ನೀಡಬೇಕೆ ಹೊರತು ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಹೇಳಿದರು.