alex Certify BREAKING NEWS: ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ…!

ಬೆಂಗಳೂರು: ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ರಾತ್ರಿ 9 ಗಂಟೆ ಬಳಿಕ ಯಾರೊಬ್ಬರೂ ಮನೆಯಿಂದ ಹೊರಬರುವಂತಿಲ್ಲ ಎಂದು ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ, ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಸ್ವಿಗ್ಗಿ ಹಾಗೂ ಜೊಮ್ಯಾಟೋ ಟೀ-ಶರ್ಟ್ ಗಳ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಟೀ-ಶರ್ಟ್ ಧರಿಸಿ, ಹಲವರು ಹೋಂ ಡಿಲೆವರಿ ನೆಪ ಹೇಳಿ ಓಡಾಟ ನಡೆಸುತ್ತಿದ್ದಾರೆ. ಇಂತವರು ಸಿಕ್ಕಿಬಿದ್ದಲ್ಲಿ ಅವರನ್ನು ಬಂಧಿಸಲಾಗುವುದು ಎಂದರು.

ʼಮಾಸ್ಕ್ʼ​ ಖರೀದಿಸಲು ಹಣವಿಲ್ಲವೆಂದು ಹಕ್ಕಿ ಗೂಡನ್ನ ಮುಖಕ್ಕೆ ಧರಿಸಿದ ವೃದ್ಧ…!

ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗೆ ಇಳಿಸಿದರೆ ಕೇಸ್ ದಾಖಲಿಸಲಾಗುವುದು ಅಲ್ಲದೇ ವಾಹನ ಸೀಜ್ ಮಾಡಲಾಗುತ್ತದೆ. ಇನ್ನು ಮದುವೆ ಸಮಾರಂಭಗಳಿಗೂ ಸಮಯ ನಿಗದಿ ಮಾಡಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಅನುಮತಿ ಪಡೆದವರು ಕಲ್ಯಾಣ ಮಂಟಪಗಳಿಗೆ ಇಂದು ರಾತ್ರಿ 9ಗಂಟೆ ಒಳಗಾಗಿ ಹೋಗಿ ತಲುಪಬೇಕು ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...