ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.
ಕಳೆದ ಎರಡು ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಎಂ ಯಡಿಯೂರಪ್ಪನವರಿಗೆ ಇಂದು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಇದೀಗ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸಿಎಂ ಬೆಳಗಾವಿ, ಬಸವಕಲ್ಯಾಣ ಹಾಗೂ ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಬೆಳಗಾವಿಗೆ ತೆರಳಿದ್ದ ಸಿಎಂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ಚುನಾವಣಾ ಪ್ರಚಾರ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದರು.