alex Certify BREAKING NEWS: ಹಾಡಹಗಲೇ ರಸ್ತೆ ಮಧ್ಯೆ ಮಹಿಳೆಯ ಬರ್ಬರ ಹತ್ಯೆ – ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಾಡಹಗಲೇ ರಸ್ತೆ ಮಧ್ಯೆ ಮಹಿಳೆಯ ಬರ್ಬರ ಹತ್ಯೆ – ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರಿಗರು

ಬೆಂಗಳೂರು: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚಾಕು ಇರಿದು ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ನಲ್ಲಿ ನಡೆದಿದೆ.

ಹಾಡಹಗಲೇ ನಡೆದ ಈ ಕೃತ್ಯಕ್ಕೆ ಸಿಲಿಕಾನ್ ಸಿಟಿಯ ನಾಗರಿಕರು ಬೆಚ್ಚಿ ಬಿದ್ದಿದ್ದಾರೆ. ಆಗಷ್ಟೇ ಮನೆಯಿಂದ ಹೊರಬಂದ ಮಹಿಳೆಯ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದಿದ್ದಾರೆ. ಬಳಿಕ ಸ್ಥಳದಲ್ಲೇ ಚಾಕುವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದು, ನರಳಾಡಿ ಸಾವನ್ನಪ್ಪಿದ್ದಾರೆ. ಇಷ್ಟಾಗ್ಯೂ ಯಾರೊಬ್ಬರೂ ಮಹಿಳೆಯ ಸಹಾಯಕ್ಕೆ ಬಂದಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಎಎಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...