ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಹೆಚ್.ವಿಶ್ವನಾಥ್ ಸಚಿವರಾಗಲು ಸಂವಿಧಾನದ ಆರ್ಟಿಕಲ್ 164(1B), 361B ಅಡಿಯಲ್ಲಿ ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತೀರ್ಪು ನೀಡಿದೆ.
ಸಿಜೆ ಎ.ಎಸ್. ಓಕಾ ಹಾಗೂ ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಹೆಚ್. ವಿಶ್ವನಾಥ್ ಅವರನ್ನು ಸಚಿವ ಸ್ಥಾನಕ್ಕೆ ಶಿಫಾರಸು ಮಾಡುವ ಮುನ್ನ ಮುಖ್ಯಮಂತ್ರಿಗಳು ಸಂವಿಧಾನಿಕವಾಗಿ ಪರಿಗಣಿಸಬೇಕು ಎಂದು ಸೂಚನೆ ನೀಡಿದೆ.
ಇನ್ನು ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್ ಸಂವಿಧಾನದ ಅಡಿಯಲ್ಲಿ ಆಯ್ಕೆಯಾಗಿರುವುದರಿಂದ ಸಚಿವ ಸ್ಥಾನ ನೀಡಲು ಅರ್ಹರಾಗಿದ್ದಾರೆ ಎಂದು ನ್ಯಾಯಪೀಠ ತಿಳಿಸಿದೆ.