ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ ಪ್ರಭೇದ ಪತ್ತೆ
ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ತಿಳಿಸಿದರು.