ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವುದು 24 ಅಲ್ಲ ಒಟ್ಟು 34 ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ ಅಧಿಕಾರಿಗಳು, ಸಚಿವರು ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 34 ಜನ ಸಾವನ್ನಪ್ಪಿದ್ದಾರೆ. ಆದರೆ ವೈದ್ಯರು ಹಾಗೂ ಅಧಿಕಾರುಗಳು ಸಚಿವರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮೃತರ ಪಟ್ಟಿಯಲ್ಲಿ ಕೇವಲ 24 ಜನರ ಹೆಸರನ್ನು ಮಾತ್ರ ಸೇರಿಸಿದ್ದಾರೆ. ಆದರೆ ಇನ್ನೂ 10 ಜನರ ಹೆಸರನ್ನು ಲಿಸ್ಟ್ ನಲ್ಲಿ ಸೇರಿಸಿಯೇ ಇಲ್ಲ ಈ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.
ಕೋವಿಡ್ ರೋಗಿಗಳ ಚಿಕಿತ್ಸೆ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ
ಆರೋಗ್ಯ ಸಚಿವ ಸುಧಾಕರ್ ಕೂಡ ಆಕ್ಸಿಜನ್ ಕೊರತೆಯಿಂದ ಕೇವಲ 3 ರೋಗಿಗಳು ಮಾತ್ರ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎನ್ನುತ್ತಿದ್ದಾರೆ. ಅಧಿಕಾರಿಗಳು ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಬೇಕು. ಮೃತ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.