ಬೆಂಗಳೂರು: ಕೊರೊನಾ ಮಹಾಮಾರಿ ರಾಜಧಾನಿ ಬೆಂಗಳೂರಿನಲ್ಲಿ ಮಿತಿಮೀರುತ್ತಿರುವುದರಿಂದ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, 8 ಜಿಲ್ಲೆಗಳಲ್ಲಿ ಈಗಿರುವ ಕೊರೊನಾ ಕರ್ಫ್ಯೂ ಮುಂದುವರೆಯಲಿದೆ. ಉಳಿದ ಯಾವೆಲ್ಲ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂಬ ಬಗ್ಗೆ ಏಪ್ರಿಲ್ 20ರಂದು ಮತ್ತೊಮ್ಮೆ ಕೋವಿಡ್ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಸಭೆ ಕರೆದು ನಿರ್ಧರಿಸಲಾಗುವುದು ಎಂದರು.
ಕೋವಿಡ್ ನಿಯಂತ್ರಣಕ್ಕೆ ಬೇರೆ ಯಾವೆಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆಯೂ ಏಪ್ರಿಲ್ 20ರಂದು ನಿರ್ಧರಿಸಲಾಗುವುದು. ಉಳಿದಂತೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನವಾಗಿಲ್ಲ ಎಂದರು.