ಬೆಂಗಳೂರು: ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಅಪಪ್ರಚಾರ; ಸೋತ ವ್ಯಕ್ತಿಯನ್ನು ಮಂತ್ರಿ ಮಾಡಿದ್ದಕ್ಕೆ ಈ ಪ್ರತಿಫಲ; ರೇಣುಕಾಚಾರ್ಯ ಕಿಡಿ
ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.