ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದರ ಮಧ್ಯೆ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್ ಎಂಬವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಮಂಡಿಯಲ್ಲಿ ಏರುವ ಮೂಲಕ ಗಮನ ಸೆಳೆದಿದ್ದಾರೆ.
ಗುರುವಾರದಂದು ಮಂಡಿಯಲ್ಲಿ ಬೆಟ್ಟ ಏರಿದ ಕಾರ್ತಿಕ್ ಕುಮಾರ್, ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದು ಉಭಯ ನಾಯಕರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಅಲ್ಲದೆ ಯಡಿಯೂರಪ್ಪನವರು ಗುಣಮುಖರಾಗುವವರೆಗೂ ಪಾದರಕ್ಷೆ ಧರಿಸುವುದಿಲ್ಲವೆಂಬ ಶಪಥವನ್ನು ದೇವಿ ಸನ್ನಿಧಿಯಲ್ಲಿ ಕೈಗೊಂಡಿದ್ದಾರೆ.