alex Certify ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ರವಿಕಾಂತ ಪಾಟೀಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ರವಿಕಾಂತ ಪಾಟೀಲ

ವಿಜಯಪುರ: ಮಾಜಿ ಶಾಸಕ ರವಿಕಾಂತ ಪಾಟೀಲ ಜೆಡಿಎಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ.

ಸಿಂದಗಿಯ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ರವಿಕಾಂತ ಪಾಟೀಲ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೂ ಸ್ಪರ್ಧೆಗೆ ಸಿದ್ಧ ಎಂದ ಸಿಎಂ ಪುತ್ರ

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಹಣಮಂತ ಮಾವಿನಮರದ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಪಕ್ಷದ ಧ್ವಜವನ್ನು ರವಿಕಾಂತ ಪಾಟೀಲ ಅವರಿಗೆ ನೀಡಿ ಸ್ವಾಗತಿಸಿದ್ದಾರೆ.

ರವಿಕಾಂತ ಪಾಟೀಲ ಇಂಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರು ಬಾರಿ ಜಯ ಗಳಿಸಿದ್ದರು. ಇದೀಗ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...