ಕಲ್ಬುರ್ಗಿ: ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪಗಳ ಕುರಿತಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ವಿಜಯೇಂದ್ರ ಬಳಿ ವೈದ್ಯರು ಹೋಗಿದ್ದ ಸಂದರ್ಭದಲ್ಲಿ ಅವರು ಚರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಮಾತ್ರವಲ್ಲ, ಯಾವ ಇಲಾಖೆಯಲ್ಲಿಯೂ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿಲ್ಲವೆಂದು ಶ್ರೀರಾಮುಲು ತಿಳಿಸಿದ್ದಾರೆ.
ಮುಖ್ಯಮಂತ್ರಿ ಮಗ ಎನ್ನುವ ಕಾರಣಕ್ಕೆ ಅವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ ಶ್ರೀರಾಮುಲು, ಇನ್ನೆರಡು ದಿನದಲ್ಲಿ ವೈದ್ಯರಿಗೆ ಸಿಹಿ ಸುದ್ದಿ ನೀಡಲಾಗುವುದು. ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.