ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ ಗಾಗಿ ನಾನು ಕಾಯುತ್ತಿದ್ದೇನೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.
ಬೆಳಗ್ಗೆ ಸೂರ್ಯ ನಮಸ್ಕಾರ, ಚಕ್ರಾಸನ ಸೇರಿ ಯೋಗಾಭ್ಯಾಸ ಮಾಡಿದ್ದು, ಮೇಲ್ನೋಟಕ್ಕೆ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.