ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಚಿವ ಸಿ.ಟಿ. ರವಿ ರಾಜೀನಾಮೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ. ರವಿ ಅವರು ಪಕ್ಷದ ವರಿಷ್ಠರು, ಸಿಎಂ ಸೂಚನೆ ನೀಡುವ ಮೊದಲೇ ಸ್ವಯಂಪ್ರೇರಿತರಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಭೇಟಿಯಾಗಿ ಅಭ್ಯುದಯ ಕಿರುಹೊತ್ತಿಗೆ ಬಿಡುಗಡೆ ಮಾಡಿದ ನಂತರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಸಿಎಂ ಸ್ವೀಕರಿಸದೇ ಸದ್ಯಕ್ಕೆ ಮುಂದುವರೆಯುವಂತೆ ಸೂಚಿಸಿದ್ದಾರೆ.
ಬಿಜೆಪಿ ನೂತನ ಪದಾಧಿಕಾರಿಗಳ ಸಭೆ ಮುಗಿದ ನಂತರ ಪಕ್ಷದ ವರಿಷ್ಠರು ನೀಡುವ ಸೂಚನೆ ಅನ್ವಯ ಅವರ ರಾಜೀನಾಮೆ ಅಂಗೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.