ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಬಹುತೇಕ ಆಗಸ್ಟ್ ಮೊದಲ ವಾರವೇ ಸಚಿವ ಸಂಪುಟ ಪುನಾರಚನೆಯಾಗಲಿದ್ದು 6 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು. ಖಾಲಿ ಇರುವ 6 ಸ್ಥಾನ ಸೇರಿದಂತೆ 10 ಜನ ಹೊಸಬರಿಗೆ ಅವಕಾಶ ನೀಡಲಾಗುವುದು. 2 ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಗುವುದು ಎಂದು ಹೇಳಲಾಗಿದೆ.
ಇದರೊಂದಿಗೆ ಪ್ರಮುಖ ಸಚಿವರ ಖಾತೆಗಳು ಬದಲಾಗಲಿವೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಹೆಚ್. ವಿಶ್ವನಾಥ್, ಆರ್. ಶಂಕರ್, ಎಂಟಿಬಿ ನಾಗರಾಜ್, ಜಿ.ಹೆಚ್. ತಿಪ್ಪಾರೆಡ್ಡಿ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ ಮೊದಲಾದವರು ಸಂಪುಟಕ್ಕೆ ಸೇರ್ಪಡೆಯಾಗಬಹುದೆದು ಹೇಳಲಾಗಿದೆ.
6 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲಿದ್ದು, ಯಾರಿಗೆ ಅವಕಾಶ ತಪ್ಪಲಿದೆ. ಯಾರಿಗೆ ಸಂಪುಟ ಸೇರಲು ಅವಕಾಶ ಸಿಗಲಿದೆ ಎನ್ನುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.