alex Certify ಬಿಗ್ ನ್ಯೂಸ್: ಸಂಪುಟಕ್ಕೆ ಎಂಟಿಬಿ ನಾಗರಾಜ್, ಆರ್. ಶಂಕರ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸಂಪುಟಕ್ಕೆ ಎಂಟಿಬಿ ನಾಗರಾಜ್, ಆರ್. ಶಂಕರ್…?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಶುರುವಾಗಿದೆ ಎನ್ನಲಾಗಿದೆ.

ವಿಧಾನಪರಿಷತ್ ಸದಸ್ಯರಾಗಲಿರುವ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಅವರಿಗೆ ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ಸಚಿವ ಸ್ಥಾನ ನೀಡಲಿದ್ದಾರೆ. ಸಚಿವ ಸಂಪುಟದಲ್ಲಿ 6 ಸ್ಥಾನ ಖಾಲಿ ಇದ್ದು, ಇವರಿಬ್ಬರಿಗೆ 2 ಸ್ಥಾನ ನೀಡಿದಲ್ಲಿ 4 ಸ್ಥಾನ ಖಾಲಿ ಉಳಿಯಲಿವೆ.

ಜುಲೈ 26 ರ ನಂತರ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಜುಲೈ 26 ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...