ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ.
ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪಸಿಂಹ ನಾಯಕ್, ಕಾಂಗ್ರೆಸ್ ಪಕ್ಷದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮ್ಮದ್, ಜೆಡಿಎಸ್ ಪಕ್ಷದ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿದೆ. ಈ ಪ್ರಕ್ರಿಯೆ ಮುಗಿದ ನಂತರ ಅವಿರೋಧ ಆಯ್ಕೆ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.