ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಅಕ್ರಮವಾಗಿ ಸಂಚರಿಸುತ್ತಿದ್ದ ಸುಮಾರು 5.50 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ಅನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್.ಟಿ.ಓ. ಇನ್ಸ್ ಪೆಕ್ಟರ್ ರಾಜಣ್ಣ, ಸುಧಾಕರ್ ಕಳೆದ 40 ದಿನಗಳಿಂದ ಮಹಾರಾಷ್ಟ್ರ ನೋಂದಣಿಯ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಅಕ್ರಮವಾಗಿ ಲ್ಯಾಂಬೋರ್ಗಿನಿ ಕಾರ್ ಸಂಚರಿಸುತ್ತಿದ್ದ ಬಗ್ಗೆ ಗಮನಿಸಿದ್ದು ವಶಕ್ಕೆ ಪಡೆಯಲು ಕ್ರಮ ಕೈಗೊಂಡಿದ್ದರು.
ಬಸವೇಶ್ವರನಗರದ ಅಂಬೇಡ್ಕರ್ ಮೈದಾನದ ಸಮೀಪ ಗ್ಯಾರೇಜ್ ಒಂದರ ಬಳಿ ನಿಲ್ಲಿಸಿದ್ದ ಕಾರ್ ಅನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 40 ಲಕ್ಷ ರೂಪಾಯಿ ತೆರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು ಈ ಕಾರ್ ಬಳಸುತ್ತಿರುವ ಮಾಲೀಕರು ದಾಖಲೆ ಹಾಜರುಪಡಿಸುವುದಾಗಿ ಹೇಳಿದ್ದಾರೆನ್ನಲಾಗಿದೆ.