ಬೆಂಗಳೂರು: ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಅನುಮತಿ ರದ್ದು ಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿ.ಕೆ. ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಲು ಹಸಿರು ನಿಶಾನೆ ದೊರೆತಿದೆ.
ಡಿ.ಕೆ. ಶಿವಕುಮಾರ್ ಆಪ್ತರಾದ ಶಶಿಕುಮಾರ್ ಶಿವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡು ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆರ್. ನಟರಾಜ್ ಅವರ ನ್ಯಾಯ ಪೀಠ ತೀರ್ಪು ಪ್ರಕಟಿಸಿದ್ದು ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರ ಮತ್ತು ಸಿಬಿಐ ವಾದವನ್ನು ಪುರಸ್ಕರಿಸಿದ್ದು ಸಿಬಿಐ ತನಿಖೆಗೆ ಸರ್ಕಾರ ಅನುಮತಿ ನೀಡಿರುವ ಆದೇಶವನ್ನು ಎತ್ತಿ ಹಿಡಿದಿದೆ.