alex Certify ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್…?

ಬೆಂಗಳೂರು: ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಅನುಮತಿ ರದ್ದು ಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಡಿ.ಕೆ. ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಲು ಹಸಿರು ನಿಶಾನೆ ದೊರೆತಿದೆ.

ಡಿ.ಕೆ. ಶಿವಕುಮಾರ್ ಆಪ್ತರಾದ ಶಶಿಕುಮಾರ್ ಶಿವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡು ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆರ್. ನಟರಾಜ್ ಅವರ ನ್ಯಾಯ ಪೀಠ ತೀರ್ಪು ಪ್ರಕಟಿಸಿದ್ದು ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರ ಮತ್ತು ಸಿಬಿಐ ವಾದವನ್ನು ಪುರಸ್ಕರಿಸಿದ್ದು ಸಿಬಿಐ ತನಿಖೆಗೆ ಸರ್ಕಾರ ಅನುಮತಿ ನೀಡಿರುವ ಆದೇಶವನ್ನು ಎತ್ತಿ ಹಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...