ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ಹೈಕೋರ್ಟ್ ನಿಂದ ಮನ್ಸೂರ್ ಅಲಿ ಖಾನ್ ಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಇಡಿ ದಾಖಲಿಸಿದ ಪ್ರಕರಣದಲ್ಲಿ 5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶೂರಿಟಿಗೆ ಸೂಚನೆ ನೀಡಲಾಗಿದೆ. ತನಿಖೆಗೆ ಸಹಕರಿಸಬೇಕು, ಸಾಕ್ಷ ನಾಶಪಡಿಸಬಾರದು, ತನಿಖೆ ಮುಗಿಯುವವರೆಗೆ ಆಸ್ತಿ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.
ಆರೋಪಿ ಮನ್ಸೂರ್ ಆಲಿಖಾನ್ ತನಿಖಾ ಸಂಸ್ಥೆಯ ಮುಂದೆ ಶರಣಾಗಿದ್ದು, ಪಾಸ್ಪೋರ್ಟ್ ಪೊಲೀಸರ ವಶಕ್ಕೆ ನೀಡಿರುವ ಹಿನ್ನೆಲೆಯಲ್ಲಿ ದೇಶ ತೊರೆಯುವ ಸಾಧ್ಯತೆ ಇಲ್ಲವೆಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಮನ್ಸೂರ್ ಅಲಿ ಖಾನ್ ವಿರುದ್ಧ ಸಿಬಿಐ ಪ್ರಕರಣ ಬಾಕಿ ಇದೆ. ಹೀಗಾಗಿ ಜಾಮೀನು ಸಿಕ್ಕರೂ ತಕ್ಷಣಕ್ಕೆ ಮನ್ಸೂರ್ ಬಿಡುಗಡೆ ಇಲ್ಲವಾಗಿದೆ. ಸಿಬಿಐ ಪ್ರಕರಣದಲ್ಲಿ ಇನ್ನೂ ಜಾಮೀನು ದೊರೆತಿಲ್ಲ.