ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವತಿಯಿಂದ ಮಾಹಿತಿ ನೀಡಲಾಗಿದೆ.
74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಕುಟುಂಬ ಸದಸ್ಯರ ವಿರುದ್ಧ ಕೇಸ್ ದಾಖಲಾಗಿದೆ. 2020 ರ ಮಾರ್ಚ್ ನಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ದಾಳಿಯ ವೇಳೆ ಮಹತ್ವದ ದಾಖಲೆ, ಕಂಪ್ಯೂಟರ್ ಹಾರ್ಡ್ ಡಿಸ್ಕ್ ವಶಕ್ಕೆ ಪಡೆಯಲಾಗಿದೆ.
ಕೇಂದ್ರೀಯ ತನಿಖಾ ದಳ ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದೆ. ಕರ್ನಾಟಕ, ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು 57 ಲಕ್ಷ ರೂಪಾಯಿ ನಗದು, ಆಸ್ತಿ ದಾಖಲೆ, ಬ್ಯಾಂಕ್ ಸಂಬಂಧಿತ ಮಾಹಿತಿ, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆಗಳನ್ನು ಪಡೆಯಲಾಗಿದೆ. ತನಿಖೆ ಮುಂದುವರೆದಿದೆ ಎಂದು ಸಿಬಿಐ ಹೇಳಿಕೆ ಬಿಡುಗಡೆ ಮಾಡಿದೆ.