
ಬೆಂಗಳೂರು: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮುತ್ತಪ್ಪ ರೈ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರದ ಬಿಡದಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಪುತ್ರನಿಗೆ ಶಾಕ್ ನೀಡಿದ್ದಾರೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ಮಾಡಲಾಗಿದೆ. ಡ್ರಗ್ ಪೆಡ್ಲರ್ ಗಳ ಜೊತೆ ಮುತ್ತಪ್ಪ ರೈ ಪುತ್ರ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.