
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ಪ್ರವೇಶಕ್ಕಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆದಿದ್ದಾರೆ.
ಇದರ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿಯ ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳಿದ್ದಲ್ಲಿ ಆನ್ಲೈನ್ ಮೂಲಕ ಆಗಸ್ಟ್ 8 ರ ಸಂಜೆ 5.30 ರೊಳಗೆ ಸಲ್ಲಿಸಬಹುದು ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿ ಹಾಗೂ ಕೀ ಉತ್ತರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http;//kea.kar.nic.in ಗೆ ಭೇಟಿ ನೀಡಿ ಆಕ್ಷೇಪಣೆಗಳಿದ್ದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ಸಹಿತ ವಿವರಗಳೊಂದಿಗೆ ಸಲ್ಲಿಸಬಹುದಾಗಿದೆ.