ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಇದರ ಮಧ್ಯೆಯೂ 2020 ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.
ಜುಲೈ 30 ಮತ್ತು 31 ರಂದು ರಾಜ್ಯದ 497 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.30 ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಬರುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದ ಬಳಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕಿದೆ.