ಬೆಂಗಳೂರು: ಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಮಹತ್ವದ ಸೂಚನೆ ನೀಡಿದ್ದು, ನಿಗದಿಯಂತೆಯೇ ಜುಲೈ 30 ರ ನಾಳೆ ಹಾಗೂ 31 ರ ನಾಡಿದ್ದು ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ.
ಈಗಾಗಲೇ ಎಲ್ಲ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಮುಂದಾಗಿದೆ. ನಾಳೆ ಬೆಳಗ್ಗೆಯಿಂದಲೇ ಪರೀಕ್ಷೆಗಳು ಆರಂಭವಾಗಲಿವೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ.
ಸೋಂಕು ತಗುಲಿದ್ದ, ಕಂಟೇನ್ ಮೆಂಟ್ ಜೋನ್ ನಲ್ಲಿದ್ದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಆದರೆ, ಸಿಇಟಿಯಲ್ಲಿ, ಸೋಂಕು ತಗುಲಿದವರಿಗೂ ಒಂದೇ ದಿನ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುವುದು. ಉನ್ನತ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಸಕಲ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವುದರಿಂದ ನಾಳೆ ಮತ್ತು ನಾಡಿದ್ದು ನಿಗದಿಯಂತೆಯೇ ಸಿಇಟಿ ಪರೀಕ್ಷೆ ನಡೆಯಲಿದೆ.