
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.
ಜುಲೈ 30ರಿಂದ ಆಗಸ್ಟ್ 1ರ ವರೆಗೆ 2020 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆದಿದ್ದು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ.
ಫಲಿತಾಂಶ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಕೈಗೊಂಡಿದೆ. ಬಹುತೇಕ ಮುಂದಿನ ವಾರ ಸಿಇಟಿ ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಲಾಗಿದೆ.