
ದಕ್ಷಿಣ ಭಾರತದ ಏಕೈಕ ಕೋರೋನಾ ಮುಕ್ತ ಜಿಲ್ಲೆಯಾಗಿರುವ ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಯುವಕನೊಬ್ಬನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ.
ಚಾಮರಾಜನಗರದಲ್ಲಿ ಇದುವರೆಗೆ ಒಂದೇ ಒಂದು ಕೊರೋನಾ ಪಾಸಿಟಿವ್ ಇರಲಿಲ್ಲ. ಲಾಕ್ಡೌನ್ ಸಡಿಲವಾಗುತ್ತಿದ್ದಂತೆ ಕೊರೋನಾ ಸೋಂಕಿನ ಆತಂಕ ಹೆಚ್ಚಾಗಿತ್ತು.
ಹನೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿ ಮಹಾರಾಷ್ಟ್ರದಿಂದ ವಾಪಸ್ಸಾಗಿದ್ದು ಅವರಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ.