ಚಾಮರಾಜನಗರ: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ದೀನ ದಯಾಳ್ ಅಂತ್ಯೋದಯ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ್ ನಿಧಿ ವಿಶೇಷ ಕಿರು ಸಾಲ ಸೌಲಭ್ಯ ನೀಡಲಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
10 ಸಾವಿರ ರೂ.ವರೆಗೆ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯಡಿ ಸಾಲ ನೀಡಲಾಗುವುದು. ಸಾಲದ ಮೊತ್ತವನ್ನು ನಿಗದಿತ ಅವಧಿಯಲ್ಲಿ ಮರುಪಾವತಿಸುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವಾರ್ಷಿಕ 7ರಷ್ಟು ಬಡ್ಡಿ ಸಹಾಯಧನವನ್ನು ನೇರ ನಗದು ವರ್ಗಾವಣೆ ಮಾಡಲಾಗುವುದು.
ಆಸಕ್ತರು ಅರ್ಜಿ ಪಡೆದು ಭರ್ತಿ ಮಾಡಿ, ಅರ್ಜಿ ನಮೂನೆಯಲ್ಲಿ ತಿಳಿಸಿರುವಂತೆ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕರಿಸಿ ಜುಲೈ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರ ಸಭೆಯ ಸಂಬಂಧಪಟ್ಟ ಶಾಖೆಯನ್ನು ಸಂಪರ್ಕಿಸುವಂತೆ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.