ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭವಾಗುವುದು ಅನುಮಾನವೆನ್ನಲಾಗಿದೆ.
ಈ ವರ್ಷವಿಡೀ ಮಕ್ಕಳಿಗೆ ಆನ್ಲೈನ್ ಕ್ಲಾಸ್ ಮಾತ್ರ ನಡೆಯಬಹುದು. ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕೆ ಬರದಿದ್ದರೆ ಶಾಲೆಗಳನ್ನು ಪುನರಾರಂಭಿಸುವ ಸಾಧ್ಯತೆ ಸದ್ಯಕ್ಕೆ ಇಲ್ಲ. ಇನ್ನು ಅನೇಕ ಶಾಲೆಗಳಲ್ಲಿ ಆನ್ಲೈನ್ ತರಗತಿಯನ್ನು ಆರಂಭಿಸಲಾಗಿದೆ. ಸರ್ಕಾರಿ ಶಾಲೆ ಮಕ್ಕಳಿಗಾಗಿ ದೂರದರ್ಶನದಲ್ಲಿ ಸೇತುಬಂಧ ಕಾರ್ಯಕ್ರಮ ಮೂಲಕ ಪಾಠ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.
8ರಿಂದ 10ನೇ ತರಗತಿ ಮಕ್ಕಳಿಗೆ ನಾಳೆಯಿಂದ ಡಿಡಿ ಚಂದನದಲ್ಲಿ ಪಾಠಮಾಡಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಜುಲೈ 20 ರಿಂದ 31ರವರೆಗೆ ಚಂದನವಾಹಿನಿಯಲ್ಲಿ ಬೋಧನೆಗೆ ವೇಳಾಪಟ್ಟಿ ಪ್ರಕಟವಾಗಿದ್ದು ಪ್ರತಿದಿನ ಅರ್ಧಗಂಟೆ ಒಂದು ವಿಷಯದಂತೆ ನಾಲ್ಕು ಗಂಟೆ ಅವಧಿಯಲ್ಲಿ ಎಂಟು ವಿಷಯಗಳನ್ನು ಪ್ರಸಾರ ಮಾಡಲಾಗುವುದು ಎಂದು ಹೇಳಲಾಗಿದೆ.