ಚಿಕ್ಕಮಗಳೂರು: ಮಂಗಳೂರು – ತುಮಕೂರು ರಾಜ್ಯ ಹೆದ್ದಾರಿ 73 ಚಾರ್ಮಾಡಿ ಘಾಟ್ ರಸ್ತೆಯ ಚಿಕ್ಕಮಗಳೂರು ಜಿಲ್ಲೆ ಗಡಿಯಿಂದ ಕೊಟ್ಟಿಗೆಹಾರದವರೆಗೆ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ಭೂ ಕುಸಿತ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ಹೇರಿದ್ದಾರೆ. ಕಳೆದ ವರ್ಷ ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆಯಾಗಿತ್ತು.
ಈ ವರ್ಷವೂ ಭಾರಿ ಮಳೆ, ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.