ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ.
ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಶಾಸಕ ಎಂ. ಕೃಷ್ಣಾರೆಡ್ಡಿ, ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.