
ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರು ಮೂಲದ ಮಂಜುನಾಥ(30), ರಾಜು(28) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.
ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.