
ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಇಟ್ಟಿಗೆಗೂಡಿನಲ್ಲಿ ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ಮನೆಯಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ಹೇಮಂತ್ ಎಂಬ ಮಗು ರಿಮೋಟ್ ಸೆಲ್ ನುಂಗಿದ್ದು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಈ ಸಂಬಂಧ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.